ಕ್ರೈಂ ಸೀನ್ ಫೋಟೋಗ್ರಫಿ ಸ್ಪರ್ಧೆಯಲ್ಲಿ ಸಾಧನೆ; ಬೀದರ ಜಿಲ್ಲಾ ಪೊಲೀಸ್ ಇಲಾಖೆಗೆ ಹೆಮ್ಮೆ

ವರದಿಗಾರರುSite Administrator
ಪ್ರಕಟಣೆ (IST)
ಓದುವ ಸಮಯ5 min read
ಹಂಚಿಕೊಳ್ಳಿ:
ಕ್ರೈಂ ಸೀನ್ ಫೋಟೋಗ್ರಫಿ ಸ್ಪರ್ಧೆಯಲ್ಲಿ ಸಾಧನೆ; ಬೀದರ ಜಿಲ್ಲಾ ಪೊಲೀಸ್ ಇಲಾಖೆಗೆ ಹೆಮ್ಮೆ

ರಾಜ್ಯಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಹುಮನಾಬಾದ್ ಸಿಪಿಐ ಸಂತೋಷ ತಟ್ಟೆಪಳ್ಳಿಗೆ ದ್ವಿತೀಯ ಸ್ಥಾನ

ಬೀದರ: ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾದ 8ನೇ ರಾಜ್ಯಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಬೀದರ ಜಿಲ್ಲೆಯ ಹುಮನಾಬಾದ್ ವೃತ್ತದ ಸಿಪಿಐ ಸಂತೋಷ ತಟ್ಟೆಪಳ್ಳಿ ಅವರು ಕ್ರೈಂ ಸೀನ್ ಫೋಟೋಗ್ರಫಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಈಶಾನ್ಯ ವಲಯದ ಕಲಬುರಗಿ ವಿಭಾಗವನ್ನು ಪ್ರತಿನಿಧಿಸಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸಂತೋಷ ತಟ್ಟೆಪಳ್ಳಿ ಅವರು ತಮ್ಮ ವೃತ್ತಿಪರ ಕೌಶಲ ಮತ್ತು ಕಾರ್ಯದಕ್ಷತೆಯಿಂದ ಗಮನ ಸೆಳೆದು ಈ ಸಾಧನೆ ಮಾಡಿದ್ದಾರೆ. 

ಅಪರಾಧ ಪ್ರಕರಣಗಳ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸುವ ಕ್ರೈಂ ಸೀನ್ ಫೋಟೋಗ್ರಫಿ ವಿಭಾಗದಲ್ಲಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿರುವುದು ಅವರ ವೃತ್ತಿಪರ ನೈಪುಣ್ಯಕ್ಕೆ ಸಾಕ್ಷಿಯಾಗಿದೆ.

ಅವರ ಈ ಸಾಧನೆಯು ಬೀದರ ಜಿಲ್ಲಾ ಪೊಲೀಸ್ ಇಲಾಖೆಗೆ ಹೆಮ್ಮೆಯ ಸಂಗತಿಯಾಗಿದ್ದು, ಈಶಾನ್ಯ ವಲಯದ ಡಿಐಜಿಪಿ ಶಾಂತನು ಸಿನ್ಹಾ, ಐಪಿಎಸ್ ಅವರು ಸಂತೋಷ ತಟ್ಟೆಪಳ್ಳಿ ಅವರ ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ.

ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಐಪಿಎಸ್ ಅವರು ಸಂತೋಷ ತಟ್ಟೆಪಳ್ಳಿ ಅವರಿಗೆ ಅಭಿನಂದನೆ ಸಲ್ಲಿಸಿದ್ದು, ಅವರ ಸಾಧನೆ ಪೊಲೀಸ್ ಇಲಾಖೆಯ ಇತರ ಅಧಿಕಾರಿ ಮತ್ತು ಸಿಬ್ಬಂದಿಗೂ ಪ್ರೇರಣೆಯಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಹುಮನಾಬಾದ್ ವೃತ್ತದ ಸಿಪಿಐ ಸಂತೋಷ ತಟ್ಟೆಪಳ್ಳಿ ಅವರಿಗೆ ಬೀದರ ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.