ಬೀದರ್ : ಜಿಲ್ಲೆಯ ಭಾಲ್ಕಿ ತಾಲೂಕಿನ ಸಾಯಿಗಾಂವ ಹೋಬಳಿಯ ಮೇಹಕರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ (ಕರ್ನಾಟಕ ಪಬ್ಲಿಕ್ ಸ್ಕೂಲ್ ಮೇಹಕರ್) ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 08-09-2026ರಂದು ಬೆಳಿಗ್ಗೆ ತಾಲೂಕು ಮಟ್ಟದ ಪ್ರಜಾಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳ ಮಹತ್ವಕಾಂಕ್ಷಿ ಯೋಜನೆಯಾದ ಪ್ರಜಾಸೇವಾ ಆಂದೋಲನ ಕಾರ್ಯಕ್ರದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಪಿಂಚಣಿ ಸಮಸ್ಯೆ, ಪಹಣಿಗಳಲ್ಲಿನ ಸಮಸ್ಯೆ, ವಸತಿ/ನಿವೇಶನ ಸಮಸ್ಯೆ, ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಎದುರಿಸುತ್ತಿರುವ ಸಮಸ್ಯೆ ಮತ್ತು ಇನ್ನಿತರ ಸರ್ಕಾರಿ ಸೇವೆಗಳ ಸಮಸ್ಯೆಗಳ ಕುರಿತು ಖುದ್ದಾಗಿ ಉಸ್ತುವಾರಿ ಸಚಿವರು ಹಾಗೂ ಶಾಸಕರನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ.
ಆದ್ದರಿಂದ ಸರ್ಕಾರ ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ಆನ್ಲೈನ್ ಮೂಲಕ ಸ್ವೀಕೃತಿ ಪಡೆಯಲು ಹಾಗೂ ಸದರಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಕೋರಿದ್ದಾರೆ.
* * * * * *
