ಸಿದ್ದರಾಮಯ್ಯ ಅವರ ಆಶೀರ್ವಾದ ಪಡೆದ ಡಿಕೆಶಿ

ವರದಿಗಾರರುSite Administrator
ಪ್ರಕಟಣೆ (IST)
ಅಪ್ಡೇಟ್ (IST)
ಓದುವ ಸಮಯ5 min read
ಹಂಚಿಕೊಳ್ಳಿ:
ಸಿದ್ದರಾಮಯ್ಯ ಅವರ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಳೂರಿನ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಹೈ-ವೋಲ್ವೇಜ್ ಉಪಾಹಾರ ಕೂಟದಲ್ಲಿ (Breakfast Meet) ಅತ್ಯಂತ ಅಪರೂಪದ ಹಾಗೂ ಭಾವನಾತ್ಮಕ ಸನ್ನಿವೇಶವೊಂದು ಸಾಕ್ಷಿಯಾಗಿದ್ದು, ಸಭೆಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತಬ್ಬಿಕೊಂಡು, ಬಳಿಕ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಈ ದೃಶ್ಯ ಸದ್ಯ ಕೈ ಪಾಳಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದು, ರಾಜಕೀಯವಾಗಿ ವಿವಿಧ ಆಲೋಚನೆಗಳು ಶುರುವಾಗಿವೆ.

ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ವದಂತಿಗಳು ತಾರಕಕ್ಕೇರಿರುವ ಬೆನ್ನಲ್ಲೇ ಸಿಎಂ ಕರೆದಿದ್ದ ಈ ಸಭೆಗೆ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಎಚ್.ಕೆ. ಪಾಟೀಲ್ ಸೇರಿದಂತೆ ಪ್ರಮುಖ ನಾಯಕರು ಆಗಮಿಸಿದರು. ಮುಖ್ಯಮಂತ್ರಿಗಳ ನಿವಾಸದ ಸುತ್ತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ರಾಜಕೀಯ ವಲಯದ ಕಣ್ಣುಗಳೆಲ್ಲವೂ ಈಗ ಕಾವೇರಿ ನಿವಾಸದ ಮೇಲೆಯೇ ನೆಟ್ಟಿವೆ.