ಚಿಟಗುಪ್ಪ ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಕೃಷ್ಣ ಪಂಚಾಳ, ಕಾರ್ಯದರ್ಶಿಯಾಗಿ ಸೈಯದ್ ಮುಸ್ತಫ್ ಆಯ್ಕೆ.

ವರದಿಗಾರರುSite Administrator
ಪ್ರಕಟಣೆ (IST)
ಅಪ್ಡೇಟ್ (IST)
ಓದುವ ಸಮಯ5 min read
ಹಂಚಿಕೊಳ್ಳಿ:
ಚಿಟಗುಪ್ಪ ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಕೃಷ್ಣ ಪಂಚಾಳ, ಕಾರ್ಯದರ್ಶಿಯಾಗಿ ಸೈಯದ್ ಮುಸ್ತಫ್ ಆಯ್ಕೆ.

ಚಿಟಗುಪ್ಪ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ       ಚಿಟಗುಪ್ಪ ತಾಲೂಕು ನೂತನ ಅಧ್ಯಕ್ಷರಾಗಿ ಕೃಷ್ಣ ಪಂಚಾಳ ಪ್ರಧಾನ ಕಾರ್ಯದರ್ಶಿಯಾಗಿ ಸೈಯದ್ ಮುಸ್ತಫ ಖಾದ್ರಿ ಅವರಿರೋಧ ಆಯ್ಕೆ ಆದರು.

ಚಿಟಗುಪ್ಪ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ, ಉಪಾಧ್ಯಕ್ಷ ಪೃತ್ವರಾಜ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸರ್ವ ಸದಸ್ಯರ ಅಭಿಪ್ರಾಯ ಸಂಗ್ರಹಿಸಿ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ, ಪತ್ರಕರ್ತರ ಸಂಘದ ಎಲ್ಲಾ ಕಾರ್ಯ ಚಟುವಟಿಕೆಗಳು ಸೂಕ್ತ ರೀತಿಯಲ್ಲಿ ನಡೆಸಿಕೊಂಡು ಹೊಗಬೇಕು. ಸಂಘದ ಎಲ್ಲಾ ಸದಸ್ಯರನ್ನು ಒಳಗೊಂಡ ಸಮಿತಿ ರಚಿಸಿಕೊಂಡು ಅಂತಿಮ ಪಟ್ಟಿಯನ್ನು ಜಿಲ್ಲಾ ಘಟಕಕ್ಕೆ ಸಲ್ಲಿಸಬೇಕು. ಎಲ್ಲರೂ ಒಂದಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಸಂತೋಷ ಚಟ್ಟಿ, ಜಿಲ್ಲಾ ಕಾರ್ಯಕಾರಣಿ ಸದಸ್ಯರಾದ ದುರ್ಯೋಧನ ಹೂಗಾರ, ಸುಧಾರಾಣಿ ಸೇರಿದಂತೆ ಚಿಟಗುಪ್ಪ ತಾಲೂಕಿನ ಸಂಘದ ಸದಸ್ಯರು ಭಾಗವಹಿಸಿದರು.