ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ವರದಿಗಾರರುSite Administrator
ಪ್ರಕಟಣೆ (IST)
ಅಪ್ಡೇಟ್ (IST)
ಓದುವ ಸಮಯ5 min read
ಹಂಚಿಕೊಳ್ಳಿ:
ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಚಾಲಕರು ಮೃತಪಟ್ಟಿರುವ ದುರ್ಘಟನೆ ಕಮಲಾಪುರ ತಾಲೂಕಿನ ಡೊಂಗರಗಾಂವ ಕ್ರಾಸ್ ಸಮೀಪ ಶನಿವಾರ ಸಂಜೆ ನಡೆದಿದೆ.

ಮೃತರನ್ನು ಕೆಎಸ್ಸಾರ್ಟಿಸಿ ಬಸ್ ಚಾಲಕ ತುಕಾರಾಮ ಹಾಗೂ ಐರಾವತ ಬಸ್ ಚಾಲಕ ಶಿವಾನಂದ ರೆಡ್ಡಿ ಎಂದು ಗುರುತಿಸಲಾಗಿದೆ. ಬೀದರ್‌ನಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಐರಾವತ ಬಸ್‌ ಹಾಗೂ ಕಲಬುರಗಿಯಿಂದ ಬೀದರ್ ಕಡೆಗೆ ಸಾಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ ಮುಖಾಮುಖಿ ಢಿಕ್ಕಿಯಾಗಿವೆ. ಢಿಕ್ಕಿಯ ತೀವ್ರತೆಗೆ ಒಬ್ಬ ಚಾಲಕ ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಚಾಲಕ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಮಾಹಿತಿ ದೊರುಬೇಕಿದೆ.