ಹಳ್ಳಕ್ಕೆ ವಿಷಯುಕ್ತ ರಾಸಾಯನಿಕ ತ್ಯಾಜ್ಯ: ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

ವರದಿಗಾರರುBidar
ಪ್ರಕಟಣೆ (IST)
ಅಪ್ಡೇಟ್ (IST)
ಓದುವ ಸಮಯ5 min read
ಹಂಚಿಕೊಳ್ಳಿ:
ಹಳ್ಳಕ್ಕೆ ವಿಷಯುಕ್ತ ರಾಸಾಯನಿಕ ತ್ಯಾಜ್ಯ: ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

ಬೀದರ: ಮಾಣಿಕನಗರದ ಹಳ್ಳಕ್ಕೆ ಹಾಗೂ ಗುರುಗಂಗಾ ಮತ್ತು ಮೀರಜಾ ನದಿಗೆ ಹುಮನಾಬಾದ್ ಕೈಗಾರಿಕಾ ಪ್ರದೇಶದ ಕೆಲವು ಕಾರ್ಖಾನೆಗಳಿಂದ ವಿಷಯುಕ್ತ ರಾಸಾಯನಿಕ ತ್ಯಾಜ್ಯ ಹರಿಸಲಾಗುತ್ತಿರುವ ಕುರಿತಂತೆ ಪರಿಶೀಲಿಸಿ ನಿಯಮಾನುಸಾರ ಕಠಿಣ ಕ್ರಮ ಜರುಗಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಯವರಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಅವರು, ಮಾಣಿಕನಗರ, ಹುಮನಾಬಾದ್, ಗಡವಂತಿ, ಮೊಳಕೇರಾ, ಧುಮ್ಮನ್ ಸೂರ್ ಹಾಗೂ ಹುಡುಗಿ ಸೇರಿದಂತೆ ಸುತ್ತಮುತ್ತಲಿನ ಅಂತರ್ಜಲ ಸಂಪೂರ್ಣ ಮಲಿನಗೊಂಡಿದೆ ಎಂಬ ಮಾಧ್ಯಮ ವರದಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಮಾಣಿಕಪ್ರಭು ದೇವಸ್ಥಾನಕ್ಕೆ ರಾಜ್ಯ ಮತ್ತು ಹೊರರಾಜ್ಯದಿಂದ ಕೂಡ ಸಾವಿರಾರು ಭಕ್ತರು ಆಗಮಿಸಿ ನಂದಿಯಲ್ಲಿ ಸ್ನಾನ ಮಾಡುವುದರ ಜೊತೆಗೆ ತೀರ್ಥ ಎಂದು ನೀರನ್ನು ಸೇವಿಸುತ್ತಾರೆ. ಜಲ ಮೂಲಗಳಿಗೆ ಈ ರೀತಿ ವಿಷಯುಕ್ತ ತ್ಯಾಜ್ಯ ಸೇರ್ಪಡೆಯಾದರೆ ಕುಡಿಯುವ ನೀರೂ ವಿಷವಾಗುತ್ತದೆ. ಈ ಹಿನ್ನೆಲೆಯಲ್ಲಿ ನೀರಿನ ಪರೀಕ್ಷೆ ಮಾಡಿಸಿ, ತ್ಯಾಜ್ಯ ಹರಿಸುತ್ತಿರುವ ಕೈಗಾರಿಕೆಗಳ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಜರುಗಿಸಿ, ಜಲ ಮೂಲ ಸಂರಕ್ಷಿಸಲು ಮತ್ತು 48 ಗಂಟೆಗಳ ಒಳಗಾಗಿ ಕೈಗೊಂಡ ಕ್ರಮದ ವರದಿ ಸಲ್ಲಿಸಲು ಈಶ್ವರ ಖಂಡ್ರೆ ಸೂಚಿಸಿದ್ದಾರೆ.