36 ಪ್ರಯಾಣಿಕರಿದ್ದ ಬಸ್ಸಿಗೆ ಬೆಂಕಿ

ವರದಿಗಾರರುSite Administrator
ಪ್ರಕಟಣೆ (IST)
ಅಪ್ಡೇಟ್ (IST)
ಓದುವ ಸಮಯ5 min read
ಹಂಚಿಕೊಳ್ಳಿ:
36 ಪ್ರಯಾಣಿಕರಿದ್ದ ಬಸ್ಸಿಗೆ ಬೆಂಕಿ

ಹಾಸನ:  ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನ ಟೈರ್ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ಶುಕ್ರವಾರ ತಡರಾತ್ರಿ ಸ್ಪೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡು ಬಸ್‌ ಸಂಪೂರ್ಣವಾಗಿ ಭಸ್ಮವಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ನಡೆದಿದ್ದು, ಬಸ್‌ನಲ್ಲಿ  36 ಮಂದಿ ಪ್ರಯಾಣಿಕರಿದ್ದರು. ಟೈರ್ ಸ್ಫೋಟವಾದ  ತಕ್ಷಣ ಚಾಲಕ ಬಸ್ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದು, ಪ್ರಯಾಣಿಕರೆಲ್ಲರೂ ಕೆಳಗಿಳಿದ ಪರಿಣಾಮ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.

ಬೆಂಕಿ ಕ್ಷಣಮಾತ್ರದಲ್ಲಿ ಹೊತ್ತಿಕೊಂಡ ಪರಿಣಾಮ ಪ್ರಯಾಣಿಕರ ಬ್ಯಾಗ್ ಗಳು ಮೊಬೈಲ್‌ಗಳು ಹಾಗೂ ಬೆಲೆಬಾಳುವ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.