ಶಿವಾಜಿ ಮಹಾರಾಜ ಜಯಂತಿಯಲ್ಲಿ ಪಾಲ್ಗೊಳ್ಳಿ
ಬೀದರ್: ನಗರದಲ್ಲಿ ಫೆ. 19 ರಂದು ನಡೆಯಲಿರುವ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಎಲ್ಲ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮರಾಠ ಕ್ರಾಂತಿ ಮೂಕ ಮೋರ್ಚಾ ಜಿಲ್ಲಾ ಸಂಯೋಜಕ ವೆಂಕಟೇಶರಾವ್ ಮಾಯಿಂದೆ ಮನವಿ ಮಾಡಿದ್ದಾರೆ.
ಅಂದು ಜಿಲ್ಲಾ ಆಡಳಿತ ವತಿಯಿಂದ ಬೆಳಿಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ, ಬೆಳಿಗ್ಗೆ 10.30ಕ್ಕೆ ಶಿವಾಜಿ ವೃತ್ತದಲ್ಲಿ ಇರುವ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ, ಮಾಲಾರ್ಪಣೆ, ನಂತರ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದ ವರೆಗೆ ಭವ್ಯ ಮೆರವಣಿಗೆ, ಮಧ್ಯಾಹ್ನ 1ಕ್ಕೆ ರಂಗ ಮಂದಿರದಲ್ಲಿ ಸಾರ್ವಜನಿಕ ಸಮಾರಂಭ, ಸಂಜೆ 4ಕ್ಕೆ ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.
ಅರ್ಥಪೂರ್ಣ ಜಯಂತಿ ಆಚರಣೆಗೆ ಭರದ ಸಿದ್ಧತೆಗಳು ನಡೆದಿವೆ. ಜಯಂತಿ ಯಶಸ್ವಿಗೆ ಸಮಾಜದವರು ಕೈಜೋಡಿಸಬೇಕು ಎಂದು ಹೇಳಿದ್ದಾರೆ.
