ರಾಜ್ಯದಲ್ಲಿ ಈ ಬಾರಿ ತೀವ್ರ ಬೇಸಿಗೆ

ವರದಿಗಾರರುSite Administrator
ಪ್ರಕಟಣೆ (IST)
ಓದುವ ಸಮಯ5 min read
ಹಂಚಿಕೊಳ್ಳಿ:
ರಾಜ್ಯದಲ್ಲಿ ಈ ಬಾರಿ ತೀವ್ರ ಬೇಸಿಗೆ

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ತೀವ್ರ ಬೇಸಿಗೆ ಎದುರಾಗುವ ಸಾಧ್ಯತೆ ಇದ್ದು, ದಾಖಲೆ ಮಟ್ಟದಲ್ಲಿ ಉಷ್ಣಾಂಶ ಏರಿಕೆಯಾಗುವ ಬಗ್ಗೆ

ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.  ಈಗಾಗಲೇ ಬಿಸಿಲಿನ ತಾಪಮಾನ ಜನರನ್ನು ಕಂಗೆಡಿಸುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಎರಡೂ ಏರಿಕೆಯಾಗಲಿವೆ ಎಂದು ಅಂದಾಜಿಸಲಾಗಿದೆ. ಏಪ್ರಿಲ್ ತಿಂಗಳಲ್ಲಿ ೩೮ರಿಂದ ೪೦ ಡಿಗ್ರಿ ಸೆಲ್ಸಿಯಸ್‌ವರೆಗೆ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ. ಬೇಸಿಗೆ ಅಧಿಕೃತವಾಗಿ ಆರಂಭವಾಗುವ ಮುನ್ನವೇ ನಗರದಲ್ಲಿ ೩೧ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಉಳಿದ ಜಿಲ್ಲೆಗಳಲ್ಲಿಯೂ ಗರಿಷ್ಠ ಉಷ್ಣಾಂಶ ೪೦ ಡಿಗ್ರಿ ಗಡಿಯನ್ನು ದಾಟುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ ಎಂದು ಸೂಚಿಸಲಾಗಿದೆ. ಇಂದಿಗೆ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಪರೀತ ಬಿಸಿಲಿನ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.