ಅಂಕೋಲಾ : ಲಾರಿ ಮತ್ತು ಬಸ್ ಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ವಿದೇಶಿ ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗಳಾದ ಘಟನೆ ರಾಷ್ಟ್ರೀಯ ಹೆದ್ದಾರಿ 52 ಸುಂಕಸಾಳ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಅಪಘಾತದಲ್ಲಿ ಒಟ್ಟು 28 ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳ ಪೈಕಿ 12 ಜನರು ವಿದೇಶಿ ಪ್ರಜೆಗಳಾಗಿದ್ದು ಅದರಲ್ಲಿ 8 ವಿದೇಶಿ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಅಂಕೋಲಾ ಮಾರ್ಗದಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿದ್ದ ಲಾರಿ ಹಾಗೂ ಹಂಪಿಯಿಂದ ಗೋವಾಕ್ಕೆ ತೆರಳುತ್ತಿದ್ದ ಸಿಬರ್ಡ್ ಬಸ್ ಮುಖಾಮುಖಿ ಡಿಕ್ಕಿ ನಡೆದಿದ್ದು ಹಿಂಬದಿಯಲ್ಲಿ ಬರುತ್ತಿದ್ದ ಗಣೇಶ್ ಟ್ರಾವೆಲ್ಸ್ ಖಾಸಗಿ ಬಸ್ ಡಿಕ್ಕಿಯಾಗಿದೆ. ಪರಿಣಾಮವಾಗಿ ಮೂರೂ ವಾಹನಗಳು ಜಖಂಗೊಂಡಿದೆ. ಅಪಘಾತದ ತೀವ್ರತೆಗೆ ಇಬ್ಬರು ಬಸ್ ಚಾಲಕರ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ.

