ಬೆಂಗಳೂರು: ಕಸ್ಟೋಡಿಯಲ್ ಡೆತ್ ಅಥವಾ ಲಾಕಪ್ ಡೆತ್ ಬಗ್ಗೆ ಪೊಲೀಸರ ಕರ್ತವ್ಯಲೋಪದ ಬಗ್ಗೆ ಅಪಸ್ವರ ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ನಿರ್ದೇಶಕ ಡಾ ಎಂ.ಎ.ಸಲೀಂ ಮಹಾ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ (ಬಿಎನ್‌ಎಸ್ಎಸ್) ಅಡಿಯಲ್ಲಿ ಕೆಲವೊಂದು ನಿಯಮ ಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ರಾಜ್ಯ ಪೊಲೀಸರಿಗೆ ಸೂಚಿಸಿದ್ದಾರೆ.
ಪೊಲೀಸ್ ಕಸ್ಟಡಿಯಲ್ಲಿರುವಾಗ ದೌರ್ಜನ್ಯ ನಡೆದ ಕೂಡಲೇ ಸ್ಥಳೀಯ ಠಾಣಾಧಿಕಾರಿ ವಿಳಂಬವಿಲ್ಲದೆ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸಬೇಕು. ನಂತರ ಹಿರಿಯ ಅಧಿಕಾರಿಗಳಿಗೆ ತಕ್ಷಣ ವರದಿ ಸಲ್ಲಿಸಬೇಕು. ದೌರ್ಜನ್ಯ, ಕಸ್ಟೋಡಿಯಲ್ ಪ್ರಕರಣಗಳು ನಡೆದರೆ ತಕ್ಷಣವೇ ಠಾಣೆಯ ಸಿಸಿ ದೃಶ್ಯಾವಳಿಗಳನ್ನು ವಶಪಡಿಸಿಕೊಳ್ಳಬೇಕು.
ಒಂದು ವೇಳೆ ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಮೃತಪಟ್ಟರೆ, ಕೂಡಲೇ ಸಂಬಂಧಪಟ್ಟ ಜುಡಿಷಿಯಲ್ ಮ್ಯಾಜಿಸ್ಟ್ರೇಟ್‌ಗೆ ಅಧಿಕೃತ ಮಾಹಿತಿ ನೀಡಿ, ಇನ್‌ಕ್ವೆಸ್ಟ್ ಹಾಗೂ ನ್ಯಾಯಾಂಗ ಕೋರಬೇಕು. ತನಿಖೆಗೆ ಸಂತ್ರಸ್ತರ ಹೇಳಿಕೆಗಳು ಮತ್ತು ಶವಪರೀಕ್ಷೆಯ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಆಡಿಯೋ ಮತ್ತು ವಿಡಿಯೋ . ರೆಕಾರ್ಡ್ ಪ್ರಕ್ರಿಯೆಯೊಂದಿಗೆ ಮಾಡಬೇಕು. ಆ ಬಳಿಕ ಪ್ರಕರಣ ಸಿಐಡಿಗೆ ವರ್ಗಾವಣೆಯಾದರೆ, ತನಿಖಾಧಿಕಾರಿಗಳು ಹಳೆಯ ಡೈರಿಗಳನ್ನು ಪರಿಶೀಲಿಸುವುದು ಮಾತ್ರವಲ್ಲದೆ, ಖುದ್ದಾಗಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ಪ್ರಕ್ರಿಯೆ ಸರಿಯಾಗಿದೆಯೇ ಮರುಪರಿಶೀಲಿಸಬೇಕು. ಎಂದು

