ಬೀದರ್: ಜಿಲ್ಲಾ ಕೇಂದ್ರ ಸಹಕಾರಿ (ಡಿ.ಸಿ.ಸಿ) ಬ್ಯಾಂಕ್ನ ಉಪಾಧ್ಯಕ್ಷರಾದ ಅಭಿಷೇಕ ಪಾಟೀಲ ರಾಜೀನಾಮೆ ನಂತರ ಇದೀಗ ಮತ್ತೆ ಇಬ್ಬರು ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ನಿರ್ದೇಶಕರಾದ ರೇವಣಸಿದ್ಧಪ್ಪ ಪಾಟೀಲ್ ಹಾಗೂ ಉಮೇಶ ಕುಲಕರ್ಣಿ ಅವರು ತಮ್ಮ ನಿರ್ದೇಶಕ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಕುರಿತು ಬ್ಯಾಂಕ್ನ ಮುಖ್ಯ ನಿರ್ವಾಹಕರಿಗೆ ರಾಜಿನಾಮೆ ಪತ್ರ ಬರೆದಿರುವ ಅವರು, ರೈತರ ಹಿತದೃಷ್ಟಿಯಿಂದ, ವೈಯಕ್ತಿಕ ಕಾರಣಗಳು ಹಾಗೂ ಅನಿವಾರ್ಯ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ತಮ್ಮ ಹುದ್ದೆಯ ಜವಾಬ್ದಾರಿಯನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲವಾದ್ದರಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ತಮ್ಮ ರಾಜೀನಾಮೆಯನ್ನು ಅಂಗೀಕರಿಸಿ, ನಿಯಮಾನುಸಾರವಾಗಿ ನಿರ್ದೇಶಕರ ಹುದ್ದೆಯ ಜವಾಬ್ದಾರಿಗಳಿಂದ ಬಿಡುಗಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕಾಗಿ ವಿನಂತಿಸಿಕೊಂಡಿದ್ದಾರೆ. ಅಲ್ಲದೆ, ತಾವು ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಹಕರಿಸಿದ ಬ್ಯಾಂಕಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿವರ್ಗಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ.